ಅಮರಾವತಿ (ಮಹಾರಾಷ್ಟ್ರ): ಇತ್ತೀಚೆಗೆ ಮುಕ್ತಾಯಗೊಂಡ ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದೆ ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿಯ 22 ಅಭ್ಯರ್ಥಿಗಳು ಆರೋಪಿಸಿದ್ದು, ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ.
ದೂರು ನೀಡಿರುವ 22 ಅಭ್ಯರ್ಥಿಗಳ ಪೈಕಿ 20 ಅಭ್ಯರ್ಥಿಗಳು ಜನವರಿ 15ರಂದು ನಡೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರೆ...
