ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದ ಪರಿಣಾಮ, ಏಕಾಏಕಿ ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು 37 ವರ್ಷದ ಯಶ್ವಂತ್ ಎಂದು ಗುರುತಿಸಲಾಗಿದೆ. ಅವರು ಸಾರಿಗೆ ಸಂಸ್ಥೆಯಲ್ಲಿ ನೌಕರರಾಗಿದ್ದು, ಅರಕಲಗೂಡು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....